ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ಜೆ.ಆರ್.ಎಫ್ ಪರೀಕ್ಷೆಯಲ್ಲಿ ದೇಶದಲ್ಲೇ ಪ್ರಥಮ

March 09, 2018 ⊄   By: Hasiru Suddimane

ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್, ಪ್ರತಿ ವರ್ಷ ಅಖಿಲ ಭಾರತ ಮಟ್ಟದಲ್ಲಿ ಕೃಷಿ ವಿಜ್ಞಾನಗಳು, ತೋಟಗಾರಿಕೆ, ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಹಾಗೂ ಪಶು ವೈದ್ಯಕೀಯ ನಾಲ್ಕು ವಿಭಾಗಗಳಲ್ಲಿ ಕಿರಿಯ ಸಂಶೋಧನಾ ಫೆಲೋಷಿಪ್ (ಜೆಆರ್ ಎಫ್)ಗೆ ಪರೀಕ್ಷೆಗಳನ್ನು ನಡೆಸುತ್ತದೆ. 2016-17ನೇ ಸಾಲಿನಲ್ಲಿ ರಾಷ್ಟ್ರದ 60 ಕೃಷಿ ವಿಶ್ವವಿದ್ಯಾನಿಲಯಗಳು, ಮೂರು ಕೇಂದ್ರೀಯ ಮತ್ತು ನಾಲ್ಕು ಡೀಮ್ಡ್ ಕೃಷಿ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿಗಳು ಒಟ್ಟು 475 ಜೆಆರ್ ಎಫ್ ಗಾಗಿ ಪರೀಕ್ಷೆಯಲ್ಲಿ ಭಾಗವಹಿಸಿದ್ದರು. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ 50 ವಿದ್ಯಾರ್ಥಿಗಳು ಕೃಷಿ ವಿಜ್ಞಾನಗಳು ವಿಭಾಗದಲ್ಲಿ ಮತ್ತು 10 ವಿದ್ಯಾರ್ಥಿಗಳು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿರುತ್ತಾರೆ. ಕೃಷಿ ವಿಜ್ಞಾನಗಳು ಹಾಗೂ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಎರಡೂ ವಿಭಾಗಗಳಲ್ಲೂ ಸಹ ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಪ್ರಥಮ ಸ್ಥಾನಗಳಿಸಿರುತ್ತದೆ. ನವದೆಹಲಿಯಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ ಕುಲಪತಿಗಳಾದ ಡಾ.ಎಂ.ಎಸ್. ನಟರಾಜು ರವರು, ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಸನ್ಮಾನ್ಯ ಶ್ರೀ ರಾಧಮೋಹನ್ ಸಿಂಗ್ ರವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.


Share This :
  •  
  •  

RELATED NEWS 

Readers Comments (0) 

COMMENT

Characters Remaining : 1000

Latest News

ಬೆಂಗಳೂರು ಕೃಷಿ ವಿವಿಗೆ ಕುಲಪತಿಯಾಗಿ ಡಾ. ರಾಜೇಂದ್ರ ಪ್ರಸಾದ್‍ ನೇಮಕ
ಬೆಂಗಳೂರು ಕೃಷಿ ವಿವಿಗೆ ಕುಲಪತಿಯಾಗಿ ಡಾ. ರಾಜೇಂದ್ರ ಪ್ರಸಾದ್‍ ನೇಮಕ
September 19, 2018

ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ ಡಾ.ಎಸ್.ರಾಜೇಂದ್ರಪ್ರಸಾದ್ ಹಾಗೂ ಧಾರವಾಡ ಕೃಷಿ ವಿವಿಗೆ ಡಾ. ಎಂ.ಬಿ.ಛೆಟ್ಟಿ ಅವರನ್ನು ಕುಲಪತಿಯಾಗಿ ನೇಮಕಗೊಂಡಿದ್ದಾರೆ.