ಇದೇ 13,14ರಂದು ಕೇರಳ, ಲಕ್ಷದ್ವೀಪ ಕರಾವಳಿಯಲ್ಲಿ ಭಾರಿ ಮಳೆ

March 12, 2018 ⊄   By: Hasiru Suddimane

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಮುಂದಿನ ಎರಡು ದಿನಗಳಲ್ಲಿ ಅಂದರೆ ಮಾರ್ಚ್ 13 ಮತ್ತು 14 ರಂದು ಕೇರಳ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅರಬ್ಬೀ ಸಮುದ್ರದ ಆಗ್ನೇಯ ಭಾಗ ಮಾಲ್ಡೀವ್ಸ್ ಕರಾವಳಿ ಕಡೆಗೂ ವ್ಯಾಪಿಸಲಿದೆ' ಎಂದು ಹವಾಮಾನ ಇಲಾಖೆ ಸೋಮವಾರ ಎಚ್ಚರಿಕೆ ನೀಡಿದೆ.

ಮಾರ್ಚ್ 13ರಂದು ಕೇರಳದ ಕೆಲವು ಪ್ರದೇಶಗಳಲ್ಲಿ ಮಳೆ, ಗುಡುಗು-ಮಿಂಚಿನೊಂದಿಗೆ ಮೋಡಕವಿದ ವಾತಾವರಣ ಇರಲಿದ್ದು, 14ಕ್ಕೆ ಸಂಪೂರ್ಣ ದಕ್ಷಿಣ ಕೇರಳ ಹಾಗೂ ಲಕ್ಷದ್ವೀಪದಲ್ಲಿ ಮಳೆ ಆವರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಂಬಂಧ ಹವಾಮಾನ ಇಲಾಖೆಯ ರಾಜ್ಯ ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸೋಮವಾರ ರಾಜ್ಯ ವಿಪತ್ತು ನಿರ್ವಹಣೆ ಆಡಳಿತಾಧಿಕಾರಿಗಳ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸುವಂತೆ ಸ್ಥಳೀಯ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ದಕ್ಷಿಣ ತಮಿಳುನಾಡು ಹಾಗೂ ಕೇರಳ ಕರಾವಳಿಯಲ್ಲಿ ಮಾರ್ಚ್ 15ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸಲಹೆ ನೀಡಲಾಗಿದೆ.


Share This :
  •  
  •  

RELATED NEWS 

Readers Comments (0) 

COMMENT

Characters Remaining : 1000

Latest News

ಹೆಚ್ಚಾಯ್ತು ಹಿಮಪಾತ: ಜನಜೀವನ ಅಸ್ತವ್ಯಸ್ತ
ಹೆಚ್ಚಾಯ್ತು ಹಿಮಪಾತ: ಜನಜೀವನ ಅಸ್ತವ್ಯಸ್ತ
December 11, 2018

ಸುತ್ತಲೂ ಹಿಮ, ದಿನವಿಡೀ ಮಳೆಯಂತೆಯೇ ಹಿಮವೂ ಸುರಿಯುತ್ತಿದೆ ಚಳಿಗಾಲ ಬಂತೆಂದರೆ ಹಿಮದ ರಾಶಿ ಪ್ರತ್ಯಕ್ಷವಾಗುತ್ತದೆ. ಅಮೆರಿಕ ರಾಜಧಾನಿ ವಾಷಿಂಗ್ ಟನ್ ಡಿಸಿಯಲ್ಲಿ ಭಾರಿ ಹಿಮಪಾತವಾಗುತ್ತಿದೆ. ಈ ಕಾರಣದಿಂದ ರಸ್ತೆ, ರೈಲು ಮತ್ತು ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ.